Thursday, August 11, 2022

Latest Posts

ಕೊರೋನಾದಿಂದ ಹಿರಿಯ ರಂಗಭೂಮಿ ಕಲಾವಿದ,ನಾಟಕಕಾರ ಎಂ.ಸಿ ಆನಂದ್ ನಿಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಹಿರಿಯ ರಂಗಭೂಮಿ ಕಲಾವಿದ, ನಾಟಕಕಾರ ಎಂ.ಸಿ ಆನಂದ್ ಇಂದು ಕೊರೋನಾದಿಂದ ಮೃತಪಟ್ಟಿದ್ದಾರೆ.
ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಫಲಕಾರಿಯಾಗದೇ ಇಂದು ಬೆಳಗ್ಗೆ 11-30ಕ್ಕೆ ಮೃತಪಟ್ಟಿದ್ದಾರೆ. ಅವರ ಪತ್ನಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರಕಲೆ, ಚಲನಚಿತ್ರಗಳಲ್ಲಿ ನಟನೆ, 1965 ರಿಂದಲೇ ನಾಟಕ ರಚನೆ, ನಿರ್ದೇಶನ, ರೂಪಾಂತರ, ರಂಗವಿನ್ಯಾಸದಲ್ಲಿ ತೊಡಗಿಸಿಕೊಂಡಿದ್ದರು. ಖ್ಯಾತ ನಿರ್ದೇಶಕರಾದ ಬಿ.ವಿ.ಕಾರಂತ, ಎಂ.ಎಸ್‌ ಸತ್ಯು, ಪ್ರಸನ್ನ, ಶಂಕರ್ ನಾಗ್ ಪ್ರಮುಖರ ನಾಟಕಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿಯಿಂದ ಪುರಸ್ಕಾರಗೊಂಡಿದ್ದರು‌. ಕಿರುಚಿತ್ರಗಳಿಗೆ ರಾಷ್ಟ್ರಮಟ್ಟದ ಪುರಸ್ಕಾರ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss