Sunday, August 14, 2022

Latest Posts

ಹಿರಿಯ ಚಿಂತಕ, ಲೇಖಕ, ವಿಮರ್ಶಕ ಕೊಳಂಬರ ಜಿ. ರಾಜಶೇಖರ್ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗು ಜನಪರ ಹೋರಾಟಗಾರ ಉಡುಪಿ ಕೊಳಂಬೆಯ ನಿವಾಸಿ ಜಿ. ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

2019 ರಿಂದ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ (ಪಾರ್ಕಿಂಸನ್ ಪ್ಲಸ್) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಶ್ವಾಸಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಗುರುವಾರ 21 ಜುಲೈ ರಂದು ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss