ಹೊಸದಿಗಂತ ಡಿಜಿಟಲ್ ಡೆಸ್ಕ್ :
ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಮುಕುಲ್ ರಾಯ್ ಅವರನ್ನು ಅನಾರೋಗ್ಯದ ಹಿನ್ನೆಲೆ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ನರಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ರೈಲ್ವೆ ಸಚಿವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.