ಹೃದಯಾಘಾತದಿಂದ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ದಿಲೀಪ್ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಐಪಿಎಸ್ ಅಧಿಕಾರಿ ಆರ್‌.ದಿಲೀಪ್ ಅವರು ಹೃದಯಾಘಾತದಿಂದ ಗುರುವಾರ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇತ್ತೀಚೆಗೆ ಲಿವರ್​ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು. ಕೆಲ‌ವು ದಿನಗಳ ಹಿಂದೆ‌ ಮತ್ತೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತಿದ್ದರು.‌ ಈ ಹಿಂದೆ ಹುಬ್ಬಳಿ-ಧಾರವಾಡ ಪೊಲೀಸ್ ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದರು‌.

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!