Friday, March 24, 2023

Latest Posts

ಖ್ಯಾತ ಸಾಹಿತಿ, ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಖ್ಯಾತ ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನವರಾದ ಮುದ್ರಾಡಿಯವರು ಶಿಕ್ಷಕರಾಗಿದ್ದುಕೊಂಡು ಯಕ್ಷಗಾನ (Yakshagana), ನಾಟಕ, ಸಾಹಿತ್ಯ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದರು.

ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅವರಿಗೆ ಸಂದಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ಬಳಗವನ್ನು ಅಗಲಿದ್ದಾರೆ. ಮಂಗಳವಾರ ಸಂಜೆ ಮುದ್ರಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!