ಹೊಸದಿಗಂತ ಡಿಜಿಟಲ್ ಡೆಸ್ಕ್:
8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಶಾಲೆಯಲ್ಲೇ ನೇಣಿಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಸೀನಿಯರ್ಸ್ ರ್ಯಾಗಿಂಗ್ ಕಾರಣ ಎಂದು ಹೇಳಲಾಗಿದೆ.
8ನೇ ತರಗತಿ ವಿದ್ಯಾರ್ಥಿ ಪ್ರೇಮ ಸಾಗರ(13) ನೇಣಿಗೆ ಶರಣಾದ ವಿದ್ಯಾರ್ಥಿ. ಈತ ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದವನು. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಶರಣಾಗಿದ್ದಾನೆ ಶಂಕೆ ವ್ಯಕ್ತವಾಗಿದೆ. ತನ್ನ ವಾಸ್ತವ್ಯ ಕೊಠಡಿಗೆ ಬಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಪ್ರೇಮ ಸಾಗರ ಮೃತದೇಹವನ್ನು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.