ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕ ಎನ್‌ಕೌಂಟರ್: ಒಟ್ಟು ಐವರು ಉಗ್ರರ ಸದೆಬಡೆದ ಭದ್ರತಾ ಪಡೆಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಕಾಶ್ಮೀರದ ಬುದಗಾಂವ್ ಮತ್ತು ಪುಲ್ವಾಮಾದಲ್ಲಿ ರಕ್ಷಣಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಮತ್ತು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಐವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಈ ಬಗ್ಗೆ ಕಾಶ್ಮೀರದ ಐಜಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದು, ಜೈಷ್-ಇ-ಮೊಹಮ್ಮದ್‌ನ ಕಮಾಂಡರ್ ಜಾಹೀದ್ ವಾನಿ ಕೂಡ ಹತ್ಯೆಯಾದವರಲ್ಲಿ ಒಬ್ಬರು ಎಂದು ಮಾಹಿತಿ ನೀಡಿದ್ದಾರೆ.

ಪುಲ್ವಾಮಾದ ನೈರಾ ಪ್ರದೇಶದಲ್ಲಿ ಶನಿವಾರ ರಾತ್ರಿಯಿಡೀ ನಡೆದ ಎನ್‌ಕೌಂಟರ್ ಇದಾಗಿದ್ದು, ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!