Saturday, April 1, 2023

Latest Posts

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾದ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ವ್ಯಾಪ್ತಿಯ ಕೋಣಕೇರಿಯಲ್ಲಿ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದ ಅನ್ವಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದ್ದಾರೆ.

ರಾಜ್ಯದಲ್ಲಿ ಮುಂದಿನ ಮೂರು ವರ್ಷದಲ್ಲಿ 25 ಸಾವಿರಕ್ಕೂ ಹೆಚ್ಚು ತರಗತಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತದೆ. ಹಾಗೇ ಸ್ವಾತಂತ್ರ್ಯ ದಿನಕ್ಕೂ ಮುನ್ನ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!