ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ; ದೆಹಲಿ ಕೋರ್ಟ್‌ ಮುಂದೆ ತಪ್ಪೊಪ್ಪಿಕೊಂಡ ಯಾಸಿನ್ ಮಲಿಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ 2017 ರಲ್ಲಿ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ತನ್ನ ಮೇಲಿನ ಎಲ್ಲಾ ಆರೋಪಗಳನ್ನು ದೆಹಲಿ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾನೆ. ಇದರಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿರುವ ಆರೋಪಗಳು ಸೇರಿವೆ.
ನಿಷೇಧಿತ ಜಮ್ಮು ಕಾಶ್ಮೀರ ಲಿಬರೇಶನ್‌ ಫ್ರಂಟ್‌ ಮುಖ್ಯುಸ್ಥ ಯಾಸಿನ್‌ ಮಲ್ಲಿಕ್‌ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), ಸೆಕ್ಷನ್ 17 (ಭಯೋತ್ಪಾದಕ ಕೃತ್ಯಗಳಿಗೆ ನಿಧಿ ಸಂಗ್ರಹಿಸುವುದು), ಮಲಿಕ್ ವಿರುದ್ಧ ಯುಎಪಿಎ ಸೆಕ್ಷನ್ 18 (ಭಯೋತ್ಪಾದಕ ಕೃತ್ಯಕ್ಕೆ ಪಿತೂರಿ), ಮತ್ತು 20 (ಭಯೋತ್ಪಾದಕ ಗುಂಪು ಅಥವಾ ಸಂಘಟನೆಯ ಸದಸ್ಯ) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 124-ಎ (ದೇಶದ್ರೋಹ) ಸೇರಿದಂತೆ ತನ್ನ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳಿಗೆ ತಪ್ಪೊಪ್ಪಿಕೊಳ್ಳುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾನೆ.
ನ್ಯಾಯಾಲಯವು ಮೇ 19 ರಂದು ಮತ್ತೊಮ್ಮೆ ಪ್ರಕರಣದ ವಿಚಾರಣೆ ನಡೆಸಿ ಮತ್ತು ಮಲಿಕ್ ವಿರುದ್ಧದ ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸುವುದಾಗಿ ನ್ಯಾಯಾಲಯ ಘೋಷಿಸಿದೆ.
ಭಯೋತ್ಪಾದನೆ ಪ್ರಕರಣದಲ್ಲಿ ಘೋಷಿತ ಅಪರಾಧಿಗಳು (ಪಿಒ) ಎಂದು ಘೋಷಿಸಲಾದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ವಿರುದ್ಧವೂ ಆರೋಪಪಟ್ಟಿ ಸಲ್ಲಿಸಲಾಗಿದೆ. ತನ್ಮಧ್ಯೆ, ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರಾದ ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ, ಶಬ್ಬೀರ್ ಶಾ, ಮಸರತ್ ಆಲಂ, ಎಂಡಿ ಯೂಸುಫ್ ಶಾ ಮತ್ತು ಇತರ ವಿರುದ್ಧವು ನ್ಯಾಯಾಲಯ ಶೀಘ್ರ ತೀರ್ಪು ನೀಡಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!