ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದ ಏರ್‌ಪೋರ್ಟ್ ಫ್ಲೈಓವರ್‌ನಲ್ಲಿ ನಿನ್ನೆ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ನಾಲ್ಕು ಕಾರುಗಳು ಪರಸ್ಪರ ಡಿಕ್ಕಿಹೊಡೆದು ಸರಣಿ ಅಪಘಾತ ಸಂಭವಿಸಿದೆ.
ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ವಿಮಾನ ನಿಲ್ದಾಣದ ಕಡೆಗೆ ತೆರಳುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿಯಾಗಿದ್ದು, ಫ್ಲೈಓವರ್‌ನಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಯಿತು.
ಅಪಘಾತದಲ್ಲಿ ಒಟ್ಟು ನಾಲ್ಕು ಕಾರುಗಳು ಒಳಗೊಂಡಿದ್ದು, ಕೆಲವು ವಾಹನಗಳಿಗೆ ಸಣ್ಣಪುಟ್ಟ ಹಾನಿಯಾಗಿದೆ. ಯಾವುದೇ ಗಂಭೀರ ಗಾಯಗಳು ಅಥವಾ ಪ್ರಾಣಾಪಾಯವಾಗಿಲ್ಲದಿದ್ದರೂ, ವಾಹನ ಚಾಲಕರು ಮತ್ತು ಪ್ರಯಾಣಿಕರು ಆಘಾತಕ್ಕೊಳಗಾಗಿದ್ದಾರೆ.