ಪಾವಂಜೆ ಸೇತುವೆಯಲ್ಲಿ ಸರಣಿ ಅಪಘಾತ: ಮಹಿಳೆಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ರಾಷ್ಟ್ರೀಯ ಹೆದ್ದಾರಿಯಲ್ಲಿದಕ್ಷಿಣ ಕನ್ನಡ ಜಿಲ್ಲೆಯ ಪಾವಂಜೆ ಸೇತುವೆಯಲ್ಲಿ ಆಟೋರಿಕ್ಷಾ, ಬಸ್ ಹಾಗೂ ಲಾರಿಗಳ ನಡುವೆ ನಡೆದ ಸರಣಿ ಅಪಘಾತ ನಡೆದಿದ್ದು ಮಂಗಳೂರು ನಿವಾಸಿ ಸರಸ್ವತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ
ಮಂಗಳೂರಿನಿಂದ ಮುಲ್ಕಿ ಕಡೆಗೆ ಹೋಗುತ್ತಿದ್ದು ಆಟೋ ಗೆ ಪಾವಂಜೆ ಸೇತುವೆ ಬಳಿ ಮುಂಬೈ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದಿದೆ ಈ ಸಂದರ್ಭ ಬಸ್ಸಿನ ಹಿಂದೆ ಇದ್ದ ಲಾರಿ ಬಸ್ಸಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂರು ವಾಹನಗಳಿಗೆ ಹಾನಿಯಾಗಿದ್ದು ಗಂಭೀರ ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!