ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂಡಿಗೆರೆಯ ಬಣಕಲ್-ಕೊಟ್ಟಿಗೆಹಾರ ರಸ್ತೆಯಲ್ಲಿ ಮೆಸ್ಕಾಂ ಲಾರಿ, ಓಮಿನಿ ಹಾಗೂ ಆಲ್ಟೋ ಕಾರು ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಿಂದಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಾರಿ ಹಾಗೂ ಓಮಿನಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಬಳಿಕ ಮತ್ತೊಂದು ಕಾರು ಸಹ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಓಮಿನಿ ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ತೆರಳುತ್ತಿತ್ತು. ಮೆಸ್ಕಾಂ ಲಾರಿ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡ ಮೂವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.