ಎರಡು ಟಿಪ್ಪರ್ ಲಾರಿ, ಕಾರು ನಡುವೆ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎರಡು ಟಿಪ್ಪರ್ ಲಾರಿಗಳು ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕೋಲಾರ ಹೆದ್ದಾರಿಯ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.

ಕಾರು ಎರಡು ಟ್ರಕ್‌ಗಳ ನಡುವೆ ಸಿಲುಕಿಕೊಂಡಿದ್ದರಿಂದ ಮುಂಜಾನೆ ಈ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಹೊಸಕೋಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಹೊಸಕೋಟೆ ಹೆದ್ದಾರಿಯಲ್ಲಿ ಕಿಲೋಮೀಟರ್ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!