ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ ಸಂಭವಿಸಿದೆ . ಇವಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತ ಸಂಭವಿಸಿ, 9 ವಾಹನಗಳು ಜಖಂಗೊಂಡಿರುವ ಘಟನೆ ನಡೆದಿದೆ.
ಸಿಗ್ನಲ್‌ನಲ್ಲಿ ವಾಹನಗಳು ನಿಂತಿದ್ದಾಗ ಏಕಾಏಕಿ ಬಸ್ ನುಗ್ಗಿದ ಪರಿಣಾಮ ಮುಂಭಾಗದಲ್ಲಿದ್ದ 4 ಕಾರು, 4 ಆಟೋ ಒಂದು ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ವಾಹನಗಳು ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ವಾಹನಗಳಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬಿಎಂಟಿಸಿ ಬಸ್ ಚಾಲಕನಿಗೆ ಪಿಡ್ಸ್ ಬಂದಿದ್ದರಿಂದ ಈ ಒಂದು ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಚಾಲಕನನ್ನು ಕೂಡ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಘಟಕಕ್ಕೆ ಕಬ್ಬನ್ ಪಾರ್ಕ್ ಅಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.