ಹೊಸದಿಗಂತ ವರದಿ ವಿಜಯಪುರ:
ಸರಣಿ ಭೀಕರ ಅಪಘಾತದಲ್ಲಿ 13 ಜನರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಗುರುವಾರ ನಡೆದಿದೆ.
ಕಾರು, ಟಂಟಂ ಫ್ಯಾಜೋ, ಟಾಟಾ ವಾಹನದ ಮಧ್ಯೆ ಭೀಕರ ಅಪಘಾತ ನಡೆದಿದ್ದು, ಇಬ್ಬರ ಸ್ಥಿತಿ ತೀವ್ರ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತಕ್ಕೆ ಅತೀ ವೇಗವೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.