ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ನಡೆದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಡಿಶಾದ ಕೊರಾಪುಟ್ ಜಿಲ್ಲೆಯ ಬೋರಿಗುಮ್ಮ ಪ್ರದೇಶದಲ್ಲಿ ಎರಡು ಬೈಕ್ ಗಳು, ಆಟೋರಿಕ್ಷಾ, ಟ್ರ್ಯಾಕ್ಟರ್ ಮತ್ತು ಎಸ್‌ಯುವಿ ಡಿಕ್ಕಿ ಹೊಡೆದಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೂರು ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಪಟ್ನಾಯಕ್, ಸಂತ್ರಸ್ತರಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಸೂಚನೆ ನೀಡಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಗಾಯಗೊಂಡ 13 ಮಂದಿಯಲ್ಲಿ ನಾಲ್ವರನ್ನು ಕೊರಾಪುಟ್‌ನಲ್ಲಿರುವ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಗಾಯಾಳುಗಳನ್ನು ಬೋರಿಗುಮ್ಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ದ್ವಿಚಕ್ರವಾಹನಗಳು, ಆಟೋ ರಿಕ್ಷಾ, ಟ್ರ್ಯಾಕ್ಟರ್ ಮತ್ತು ಎಸ್‌ಯುವಿ ನಡುವೆ ಸರಣಿ ಅಪಘಾತಗಳು ಸಂಭವಿಸಿವೆ ಎಂದು ಘಟನೆಯ ವಿವರಗಳನ್ನು ಪೊಲೀಸರು ತಿಳಿಸಿದ್ದಾರೆ.