ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಬಾಂದ್ರಾ ವರ್ಲಿ ಸೀ ಲಿಂಕ್‌ನಲ್ಲಿ ಕಾರುಗಳ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟೋಲ್‌ಬೂತ್‌ನಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೆ ಹಿಂಬದಿಯಿಂದ ಮತ್ತೊಂದು ಕಾರ್ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.
ಎಷ್ಟು ವೇಗವೆಂದರೆ ಮನುಷ್ಯರ ದೇಹ ಹಾಗೂ ಕಾರ್ ಛಿದ್ರ ಛಿದ್ರವಾಗಿದೆ. ಕಾರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಇದರಲ್ಲಿ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದ್ದಾರೆ.