ಹೊಸದಿಗಂತ ವರದಿ, ಹಾಸನ :
ಅತಿ ವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರುಗಳು ಸೇರಿ ಚಲಿಸುತ್ತಿದ್ದ ಏಳು ಕಾರುಗಳು ಜಖಂಗೊಂಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚೌಲಗೆರೆ ಗ್ರಾಮದ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ 75 (ಬೆಂಗಳೂರು ಮಂಗಳೂರು ಹೆದ್ದಾರಿ) ಬಳಿ ನಡೆದಿದೆ.
ವೀಕೆಂಡ್ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿತ್ತು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವಾಹನಗಳು , ಈ ವೇಳೆ ಸುಂಕ ವಸೂಲಿ ಕೇಂದ್ರದ ಬಳಿ ಸಾಲುಗಟ್ಟಿ ನಿಂತಿದ್ದ ವಾಹನಗಳಿಗೆ ಚೋಲಗೆರೆ ಟೋಲ್ ಬಳಿ ನಿಯಂತ್ರಣ ಸಿಗದೆ ಹಿಂಬದಿಯಿಂದ ಡಿಕ್ಕಿ ಕಾರುಗಳು ಡಿಕ್ಕಿ ಹೊಡಿದೇವೆ. ಈ ಸರಣಿ ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.