ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾರಿಗೆ ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಏರ್‌ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಇನ್ನೂ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಸಂಚಾರಿ ಪೊಲೀಸರು ಮೃತರ ಸಂಬಂಧಿಕರ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದಾರೆ.
ಯಲಹಂಕ ಮೇಲ್ಸೇತುವೆ ಮೇಲೆ ಇನೋವಾ ಕಾರಿಗೆ ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿತ್ತು. ಇದರಿಂದ ಲಾರಿ ಚಾಲಕ ಹಾಗೂ ಕಾರಿನ ಚಾಲಕ ಇಬ್ಬರು ಬಲಭಾಗದಲ್ಲಿ ನಿಲ್ಲಿಸಿಕೊಂಡು ಗಲಾಟೆ ಮಾಡುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ವೋಲ್ವೋ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.