ಹೊಸದಿಗಂತ ಡಿಜಿಟಲ್ ಡೆಸ್ಕ್:
ವೋಲ್ವೋ ಬಸ್‌ನ ಚಾಲಕ ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ದ್ವಿಚಕ್ರ ವಾಹನ ಸೇರಿದಂತೆ ಆರು ವಾಹನಗಳು ಜಖಂಗೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆಯಲ್ಲಿ ನಡೆದಿದೆ. ಅ
ಹೆಬ್ಬಾಳ ಮೇಲ್ಸೇತುವೆಯಲ್ಲಿ ನಿನ್ನೆ ಬೆಳಗ್ಗೆ 9.47ರಿಂದ 9.50ರ ನಡುವೆ ಈ ಘಟನೆ ನಡೆದಿದ್ದು, ವೋಲ್ವೋ ಬಸ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಹೊತ್ತು ಎಚ್‌ಎಸ್‌ಆರ್ ಲೇಔಟ್ ಕಡೆಗೆ ಹೋಗುತ್ತಿತ್ತು.