ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 7 ಮಂದಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಸರಣಿ ಅಪಘಾತದಿಂದ 7 ಮಂದಿಗೆ ಗಂಭೀರ ಗಾಯಗಳಾಗಿವೆ.

ಪುಣೆ ಕಡೆಗೆ ತೆರಳುತ್ತಿದ್ದಾಗ ಲಾರಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದರಿಂದ ಅಪಘಾತ ಸಂಭವಿಸಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

ವಂಟಮೂರಿ ಘಾಟ್‌ ಬಳಿಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ತೆರಳುತ್ತಿದ್ದ ಲಾರಿ ಮೊದಲಿಗೆ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ವೇಳೆ ಹಿಂದೆ ಬರುತ್ತಿದ್ದ ಮೂರ್ನಾಲ್ಕು ಕಾರು ಲಾರಿಗೆ ಗುದ್ದಿದ್ದರಿಂದ ಏಳಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿವೆ.ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!