ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಸುಟ್ಟು ಭಸ್ಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭದ್ರಾದ್ರಿ ಕೊತ್ತಗೂಡೆಂ ಜಿಲ್ಲೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮೂರು ವಾಹನಗಳು ಸುಟ್ಟು ಕರಕಲಾಗಿವೆ.

ಜೂಲುರುಪಾಡು ಉಪನಗರದ ಖಮ್ಮಂ- ಕೊತ್ತಗೂಡೆಂ ಹೆದ್ದಾರಿಯಲ್ಲಿ ನಾಲ್ಕು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿವೆ. ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಲಾರಿ ಚಾಲಕ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದಾನೆ.

ಮತ್ತೊಬ್ಬ ಲಾರಿ ಚಾಲಕ ವಾಹನ ನಿಲ್ಲಿಸಿ ಆತನನ್ನು ರಕ್ಷಿಸಲು ಇನ್ನೊಂದು ಬದಿಗೆ ತೆರಳಿದ್ದಾನೆ. ತಕ್ಷಣವೇ ನಿಂತಿದ್ದ ಲಾರಿಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಲಾರಿಯ ಡೀಸೆಲ್ ಟ್ಯಾಂಕರ್ ಒಡೆದು ಬೆಂಕಿ ಹೊತ್ತಿಕೊಂಡಿದೆ. ಮೂರು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.

ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಪೊಲೀರ ಪ್ರಕಾರ, ಕೆಲವರು ಮದ್ಯ ಸೇವಿಸಿ ರಸ್ತೆಯಲ್ಲಿ ಕಾರು ನಿಲ್ಲಿಸಿದ್ದೇ ಘಟನೆಗೆ ಕಾರಣ ಎಂದಿದ್ದಾರೆ. ನಡುರಸ್ತೆಯಲ್ಲಿ ಕಾರು ನಿಲ್ಲಿಸಿದ್ದರಿಂದ ಸರಣಿ ಅಪಘಾತ ಸಂಭವಿಸಿದೆ. ಲಾರಿ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!