ಸರಣಿ ಅಪಘಾತ: 30ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ; 17 ಮಂದಿಯ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಳವಳ್ಳಿ ತಾಲೂಕಿನ ಬಸವನಪುರ ಗೇಟ್ ಸಮೀಪ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಗಾರ್ಮೆಂಟ್ಸ್ ಉದ್ಯೋಗಕ್ಕೆ ತೆರಳುತ್ತಿದ್ದ 30ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ. ಎರಡು ಖಾಸಗಿ ಬಸ್‌ಗಳು ಹಾಗೂ ಒಂದು ಟೆಂಪೋ ನಡುವೆ ಸಂಭವಿಸಿದ ಈ ಅವಘಡದಿಂದ ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಯಿತು. ಪ್ರಾಥಮಿಕ ಮಾಹಿತಿಯಂತೆ, ರಸ್ತೆಗೆ ಏಕಾಏಕಿ ಬಂದ ಬೈಕ್‌ಗೆ ಡಿಕ್ಕಿ ತಪ್ಪಿಸಲು ಚಾಲಕ ಯತ್ನಿಸಿದ ವೇಳೆ ಬಸ್ ನಿಯಂತ್ರಣ ತಪ್ಪಿ, ಎದುರಿದ್ದ ಮತ್ತೊಂದು ಬಸ್ ಮತ್ತು ಟೆಂಪೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ … Continue reading ಸರಣಿ ಅಪಘಾತ: 30ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ; 17 ಮಂದಿಯ ಸ್ಥಿತಿ ಗಂಭೀರ