Friday, December 8, 2023

Latest Posts

ಕೇರಳದಲ್ಲಿ ಸರಣಿ ಸ್ಫೋಟ: ಮಂಗಳೂರು ಸಹಿತ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌‌

ಕೇರಳದ ಎರ್ನಾಕುಲಂ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೈವಾಡ ಶಂಕೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಿದೆ.

ಗಡಿ ರಾಜ್ಯ ಕೇರಳದಲ್ಲಿ ಬಾಂಬ್ ಸ್ಫೋಟದ ನಂತರ ಕರಾವಳಿ ಜಿಲ್ಲೆ ಮಂಗಳೂರು ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಸ್ಫೊಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಕೆಲವರ ಸ್ಥಿತಿ ಗಂಭೀರವಾಗಿದೆ.

2000ಕ್ಕೂ ಹೆಚ್ಚು ಜನರು ಪ್ರಾರ್ಥನೆಗಾಗಿ ಸೇರಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದ್ದು, ಭಯೋತ್ಪಾದಕ ಕೃತ್ಯವಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!