Sunday, December 3, 2023

Latest Posts

ಕೇರಳದಲ್ಲಿ ಸರಣಿ ಸ್ಫೋಟ: ಎನ್‌ಐಎ ಅಧಿಕಾರಿಗಳಿಂದ ತನಿಖೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌‌

ಕೇರಳದ ಎರ್ನಾಕುಲಂ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಎರಡು ಬಾಕ್ಸ್‌ಗಳಲ್ಲಿ ಅಥವಾ ಬ್ಯಾಗ್‌ಗಳಲ್ಲಿ ಮುಚ್ಚಿಟ್ಟಿದ್ದ ಎರಡು ಐಇಡಿಗಳು ಸ್ಫೋಟಗೊಂಡಿವೆ ಎಂದು ತಿಳಿದುಬಂದಿದೆ.

ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. 2000ಕ್ಕೂ ಹೆಚ್ಚು ಜನರು ಪ್ರಾರ್ಥನೆಗಾಗಿ ಸೇರಿದ್ದರು.

ಕೃತ್ಯದಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಜಮ್ರಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.

ಎನ್‌ಐಎ ಕೊಚ್ಚಿ ಘಟಕ, ಕೇರಳ ಪೊಲೀಸರ ಸಮನ್ವಯದೊಂದಿಗೆ ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿದ್ದು, ಎರಡು ಐಇಡಿಗಳನ್ನು ಎರಡು ಚೀಲಗಳಲ್ಲಿ ಅಥವಾ ಪೆಟ್ಟಿಗೆಗಳಲ್ಲಿ ಮುಚ್ಚಿಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಸರಣಿ ಸ್ಫೋಟದ ಬಗ್ಗೆ ಮೊದಲು ಕಲಮಸ್ಸೆರಿಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ನಂತರ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!