ಕುಡಿದ ಮತ್ತಿನಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ: ಆರೋಪಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕುಡಿದ ಮತ್ತಿನಲ್ಲಿ ಬಾಂಬೆ ನಗರದಲ್ಲಿ ಸಂಚರಿಸುವ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ಜುಹು ಪ್ರದೇಶದ 25 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದು, ಆತ ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದಾನೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆ ಪೊಲೀಸ್ ಠಾಣೆಗೆ ಕರೆ ಮಾಡಿನಾನು ಜುಹು ವಿಲೆ ಪಾರ್ಲೆ ಪ್ರದೇಶದಿಂದ ಕರೆ ಮಾಡುತ್ತಿದ್ದೇನೆ. ಮುಂಬೈನ ಲೋಕಲ್ ರೈಲಿನಲ್ಲಿ ಬಾಂಬ್ ಇಡಲಾಗಿದೆ. ಜತೆಗೆ, ನಗರದಲ್ಲಿ ಸರಣಿ ಬಾಂಬ್ ಸ್ಫೋಟಗಳು ನಡೆಯಲಿವೆ ಎಂದು ಹೇಳಿಕೊಂಡಿದ್ದನು.

ಮೊಬೈಲ್ ಫೋನ್ ಸಂಖ್ಯೆಯ ಟವರ್‌ ಲೋಕೆಷನ್‌ ಪರಿಶೀಲಿಸಿ ಆರೋಪಿಯನ್ನು ಜುಹು ಪ್ರದೇಶದಲ್ಲಿ ಬಂಧಿಸಲಾಗಿದೆ. ಆತ ಅಲ್ಲಿಂದಲೆ ಬೆದರಿಕೆ ಕರೆ ಮಾಡಿರುವುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.ಮೊಬೈಲ್ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!