ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು: ಆರೋಪಿಗಳ ವಿರುದ್ಧ NIA ಚಾರ್ಜ್‌ಶೀಟ್‌ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಯೋಜನೆ ರೂಪಿಸಿದ್ದ ಆರು ಮಂದಿ ಶಂಕಿತರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ.

ಕಳೆದ ವರ್ಷ ಜುಲೈನಲ್ಲಿ ಆರ್‌ಟಿ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಬೆಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿದೆ. ನಂತರ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು.

ಶಂಕಿತರ ಶೋಧದ ವೇಳೆ ಏಳು ಬಂದೂಕುಗಳು, 45 ಜೀವಂತ ಗುಂಡು, ಹ್ಯಾಂಡ್ ಗ್ರೆನೇಡ್ ಮತ್ತು ವಾಕಿಟಾಕಿ ಪತ್ತೆಯಾಗಿದೆ. ಆರೋಪಿಗಳು ಬೆಂಗಳೂರು ನಗರವನ್ನು ಧ್ವಂಸ ಮಾಡಲು ಯೋಜನೆ ರೂಪಿಸಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಎಲ್ಲ ಅಂಶಗಳನ್ನು ಒಳಗೊಂಡ ಚಾರ್ಜ್ ಶೀಟ್ ಅನ್ನು ಎನ್ ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!