ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನಲ್ಲಿ ಮೃತ ಪಟ್ಟವರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಭೆಯನ್ನು ನಡೆಸಿ ಆರೋಗ್ಯ ಸಚಿವರು, ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ರಾಜ್ಯ ಸರ್ಕಾರದಿಂದ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರವನ್ನು ನೀಡುವುದಾಗಿ ತಿಳಿಸಿದರು.

ಇನ್ನೂ ಕಂಪನಿಯಿಂದಲೂ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಆಸ್ಪತ್ರೆ ಎಂಡಿಗೆ ನೋಟಿಸ್ ಕೊಡಲು ಸೂಚನೆ ಕೊಟ್ಟಿದ್ದೇನೆ ಎಂಬುದಾಗಿಯೂ ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!