ಹಾಸನದಲ್ಲಿ ಸರಣಿ ಹೃದಯಾಘಾತ: 10 ದಿನದೊಳಗೆ ಅಧ್ಯಯನದ ವರದಿ ಕೊಡಿ ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ 22ಕ್ಕೂ ಹೆಚ್ಚು ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಈ ಸರಣಿ ಸಾವುಗಳಿಗೆ ನಿಖರ ಕಾರಣ ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಎಳೆಯ ವಯಸ್ಸಿನವರ, ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!