March 31, 2026
Tuesday, March 31, 2026
spot_img

ಆರ್ ಸಿಬಿ ಮ್ಯಾಚ್ ವೇಳೆ ಸರಣಿ ಮೊಬೈಲ್ ಕಳವು: ಅಪ್ರಾಪ್ತರ ಸಹಿತ ನಾಲ್ವರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ವೇಳೆ ಸರಣಿ ಮೊಬೈಲ್ ಕಳ್ಳತನ ನಡೆದಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇವರಲ್ಲಿ ಮೂವರು ಅಪ್ರಾಪ್ತರಾಗಿದ್ದು, 18 ಲಕ್ಷ ರೂ. ಮೌಲ್ಯದ 21 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್, ಮ್ಯಾಚ್ ಸಮಯ ಮೊಬೈಲ್ ಕಳವು ಆಗಿರುವ ಕುರಿತು ಅನೇಕ ದೂರುಗಳು ಬಂದಿದ್ದು, ಈ ಹಿನ್ನೆಲೆ ಪೊಲೀಸರು ಸಿಸಿಟಿವಿ ಮತ್ತು ತಾಂತ್ರಿಕ ಪುರಾವೆಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಇದೇ ರೀತಿಯ ಬೇರೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ತನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !