June 26, 2026
Friday, June 26, 2026
spot_img

ಲಾರಿ- ಎರಡು ಬಸ್‌ಗಳ ನಡುವೆ ಸರಣಿ ಅಪಘಾತ: 25 ಕ್ಕೂ ಹೆಚ್ಚಿನ ಜನರಿಗೆ ಗಾಯ

ಹೊಸದಿಗಂತ ವರದಿ ಅಂಕೋಲಾ:

ತಾಲೂಕಿನ ಸುಂಕಸಾಳ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಲಾರಿ ಮತ್ತು ಎರಡು ಖಾಸಗಿ ಬಸ್ಸುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಸುಮಾರು 25 ಕ್ಕೂ ಹೆಚ್ಚಿನ ಜನರು ಗಾಯಗೊಂಡ ಘಟನೆ ಗುರುವಾರ ನಸುಕಿನ ಜಾವ ಸಂಭವಿಸಿದೆ.

ಗಾಯಾಳುಗಳಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಸೀ ಬರ್ಡ್ ಖಾಸಗಿ ಬಸ್ ಮತ್ತು ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು
ಸೀ ಬರ್ಡ್ ಬಸ್ಸಿಗೆ ಹಿಂದಿನಿಂದ ಬರುತ್ತಿದ್ದ ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಗಣೇಶ್ ಖಾಸಗಿ ಬಸ್ ಗುದ್ದಿದೆ.

ಅಪಘಾತದಲ್ಲಿ ಮೂರೂ ವಾಹನಗಳು ಜಖಂಗೊಂಡಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನಗಳ ಸಂಚಾರ ಅಸ್ಥವ್ಯಸ್ದವಾಯಿತು.
ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆ ಮತ್ತು ಕಾರವಾರ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !