ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇರಾಕ್ ನಲ್ಲಿನ ಅಮೆರಿಕದ ರಾಯಭಾರ ಕಚೇರಿ ಮೇಲೆ ರಾಕೆಟ್ ದಾಳಿ ನಡೆದಿದೆ ಎಂದು ಇರಾಕ್ ಸೇನೆ ಮಾಹಿತಿ ನೀಡಿದೆ.
ಕಳೆದ ಹಲವು ತಿಂಗಳುಗಳಿಂದ ಇರಾಕ್ ಹಾಗೂ ಸಿರಿಯಾದ ಮೇಲೆ ಸರಣಿ ರಾಕೆಟ್ ದಾಳಿ ನಡೆಯುತ್ತಲೇ ಇದೆ.
ಈವರೆಗೂ ಈ ದಾಳಿಯ ಹಿಂದಿನ ಉದ್ದೇಶ ತಿಳಿದು ಬಂದಿಲ್ಲ ಹಾಗೂ ದಾಳಿಯ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತುಕೊಂಡಿಲ್ಲ. ಆದರೆ ಈ ದಾಳಿಯನ್ನು ಇರಾನ್ ಪ್ರಯೋಜಿತ ಭಯೋತ್ಪಾದಕರು ನಡೆಸಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಅದೃಷ್ಟವಶಾತ್ ರಾಕೆಟ್ ದಾಳಿಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ವರ್ಷ ಸುಮಾರು 50ಕ್ಕೂ ಹೆಚ್ಚು ದಾಳಿ ನಡೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಮೆರಿಕ ಇರಾಕ್ ನಲ್ಲಿ 2,500 ಸೈನಿಕರನ್ನು ನಿಯೋಜಿಸಿದೆ.