ಶ್ರೀಲಂಕಾ ವಿರುದ್ಧದ ಸರಣಿ: ಹೊಸ ಪ್ರಾಯೋಜಕತ್ವದಡಿ ಟೀಮ್ ಇಂಡಿಯಾ ಜೆರ್ಸಿ ಅನಾವರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಟಿ20 ವಿಶ್ವಕಪ್​ನಲ್ಲಿ ಧರಿಸಿದ್ದ ಜೆರ್ಸಿಯ ವಿನ್ಯಾಸವನ್ನೇ ಈ ಬಾರಿ ಕೂಡ ಮುಂದುವರೆಸಿದ್ದು, ಆದ್ರೆ ಪ್ರಾಯೋಜಕತ್ವದಲ್ಲಿ ಬದಲಾವಣೆಯಾಗಿದೆ.

ಇಲ್ಲಿಯವರೆಗೆ ಭಾರತ ತಂಡದ ಜೆರ್ಸಿಯಲ್ಲಿ MPLನ ಲೋಗೋ ಬಳಸಲಾಗುತ್ತಿತ್ತು. ಹೊಸ ವರ್ಷದಿಂದ ಎಂಪಿಎಲ್ ಬದಲಿಗೆ ಈಗ ಕಿಲ್ಲರ್ ಬ್ರಾಂಡ್​ನ ಲೋಗೋ ಕಾಣಿಸಿಕೊಳ್ಳಲಿದೆ. MPL ಪ್ರಾಯೋಜಕತ್ವ ಮುಗಿದಿದ್ದು, ಇದೀಗ ಬಿಸಿಸಿಐ ಕಿಲ್ಲರ್ ಬ್ರಾಂಡ್​ ಜೊತೆ ಹೊಸ ಒಪ್ಪಂದ ಮಾಡಿಕೊಂಡಿದೆ.

ಭಾರತ-ಶ್ರೀಲಂಕಾ ನಡುವಣ ಟಿ20 ಸರಣಿಯು ಜನವರಿ 3 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಜನವರಿ 10 ರಿಂದ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ.

ಟೀಮ್ ಇಂಡಿಯಾ ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

ಟೀಮ್ ಇಂಡಿಯಾ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!