ಪ್ರಾಕೃತಿಕ ವಿಕೋಪ ಕಾರ್ಯಾಚರಣೆ ನಿರ್ಲಕ್ಷ್ಯ ಕಂಡರೆ ಗಂಭೀರ ಕ್ರಮ: ದ.ಕ. ಅಧಿಕಾರಿಗಳಿಗೆ ಸಚಿವ ದಿನೇಶ್ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಆಯುಕ್ತರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

ರಸ್ತೆ ಬದಿ ಗುಡ್ಡ ಕುಸಿತ ಸಂಭವಿಸಿದರೆ ಆದಷ್ಟು ಶೀಘ್ರ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ಅಪಾಯದ ಅಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು. ಪುನರ್ವಸತಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ. ಪ್ರಾಕೃತಿಕ ವಿಕೋಪದಿಂದ ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರ ವಹಿಸಬೇಕು. ಕಂಟ್ರೋಲ್ ರೂಂ ನಿರಂತರ ಕಾರ್ಯಾಚರಣೆಯಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಪ್ರಾಕೃತಿಕ ವಿಕೋಪ ಕಾರ್ಯಾಚರಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!