ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೇಶದಲ್ಲಿ ಕೊರೋನಾ ಪ್ರಸರಣ ಕುರಿತ ಅಧ್ಯಯನಕ್ಕೆ ಐಸಿಎಂಆರ್ ನಿಂದ ಶೀಘ್ರದಲ್ಲೇ ಸೆರೋ ಸರ್ವೆ: ಆರೋಗ್ಯ ಸಚಿವಾಲಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿನ 2ನೇ ಅಲೆಯ ಆರ್ಭಟ ಕಡಿಮೆವಿದ್ದರೂ ಸಾಂಕ್ರಾಮಿಕದ ಪ್ರಸರಣ ಕುರಿತ ಅಧ್ಯಯನಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲು ಶೀಘ್ರದಲ್ಲೇ ಐಸಿಎಂಆರ್ ಸೆರೋ ಸರ್ವೆ ನಡೆಸಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಇತ್ತೀಚೆಗಷ್ಟೇ ದೇಶದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮೆರೆದಿತ್ತು. ಆದರೆ ಕಳೆದೊಂದು ವಾರದಿಂದ ಈ ಅಬ್ಬರ ತಗ್ಗಿದ್ದು, ಸತತ 55ಕ್ಕೂ ಹೆಚ್ಚು ದಿನಗಳ ಬಳಿಕ ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆಯಾಗಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ದೇಶದಲ್ಲಿನ ಕೋವಿಡ್ ಪರಿಸ್ಥಿತಿ ಹಾಗೂ ಜನರಲ್ಲಿ ಪ್ರತಿಕಾಯಗಳು ಎಷ್ಟರ ಮಟ್ಟಿಗೆ ಉತ್ಪತ್ತಿಯಾಗಿವೆ ಎಂಬುದನ್ನು ತಿಳಿದುಕೊಳ್ಳಲು ಐಸಿಎಂಆರ್ ದೇಶಾದ್ಯಂತ ಸೆರೋ ಸರ್ವೆ ನಡೆಸಲಿದೆ ಎಂದು ಮಾಹಿತಿ ನೀಡಿದೆ.
ಜನರಲ್ಲಿ ಪ್ರತಿಕಾಯಗಳು ಎಷ್ಟರಮಟ್ಟಿಗೆ ಉತ್ಪತ್ತಿಯಾಗಿವೆ ಎಂಬುದನ್ನು ತಿಳಿದುಕೊಳ್ಳಲು ರಾಷ್ಟ್ರೀಯ ಸೆರೊ ಸಮೀಕ್ಷೆ ಇದೇ ತಿಂಗಳಲ್ಲಿ ಆರಂಭವಾಗುವ ಸಾಧ್ಯತೆಯಿದೆ. ರಾಜ್ಯಗಳು ಸಹ ರಾಜ್ಯವಾರು ಸೆರೊ ಸರ್ವೆ ನಡೆಸಬೇಕು ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ತಿಳಿಸಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss