spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸೆರೊಟೈಪ್- 2 ಡೆಂಗ್ಯೂ ಪ್ರಕರಣ| ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಹೆಚ್ಚಳ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕರ್ನಾಟಕ ಸೇರಿದಂತೆ 11 ರಾಜ್ಯಗಳಲ್ಲಿ ಸೆರೊಟೈಪ್- 2 ಡೆಂಗ್ಯೂ ಪ್ರಕರಣಗಳು ಹೆಚ್ಚುತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಆಂಧ್ರ ಪ್ರದೇಶ, ಗುಜರಾತ್, ಕರ್ನಾಟಕ, ಕೇರಳ, ಎಂಪಿ, ಯುಪಿ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಸೆರೊಟೈಪ್ – 2 ಡೆಂಗ್ಯೂ ಪ್ರಕರಣಗಳನ್ನು ಹೆಚ್ಚಿನ ಮಟ್ಟದಲ್ಲಿ ದಾಖಲಾಗಿದೆ.

ಈ ವೇಳೆ ಸೆರೊಟೈಪ್- 2 ಡೆಂಗ್ಯೂ ಪ್ರಕರಣವನ್ನು ತಡೆಯಲು ರಾಜ್ಯಗಳು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದುದನ್ನು ಸಚಿವಾಲಯ ಸೂಚಿಸಿದ್ದು, ಸಿರೋಟೈಪ್- 2 ಡೆಂಗ್ಯೂ ಲಕ್ಷಣಗಳು ಕಾಣಿಸಿದ ತಕ್ಷಣ ಪರೀಕ್ಷೆ ಮಾಡಿಸುವಂತೆ ಸೂಚಿಸ ಬೇಕು ಎಂದು ತಿಳಿಸಿದೆ.

ಡೆಂಗ್ಯೂ ಪರೀಕ್ಷಾ ಕಿಟ್‌ಗಳು, ಲಾರ್ವಿಸೈಡ್‌ಗಳು ಮತ್ತು ಔಷಧಿಗಳನ್ನು ಮೊದಲೇ ಸಂಗ್ರಹ ಮಾಡಿಕೊಂಡಿರಬೇಕು. ಜ್ವರ ಸಮೀಕ್ಷೆ, ಸಂಪರ್ಕಿತರ ಪತ್ತೆಹಚ್ಚುವಿಕೆ, ವೆಕ್ಟರ್ ನಿಯಂತ್ರಣ ಸೇರಿದಂತೆ ಮುಂತಾದ ಸಾರ್ವಜನಿಕ ಆರೋಗ್ಯ ಕ್ರಮಕ್ಕಾಗಿ ಕ್ಷಿಪ್ರ ಪ್ರತಿಕ್ರಿಯೆ ತಂಡಗಳ ನಿಯೋಜನೆ ಮಾಡಿಕೊಳ್ಳಬೇಕು ಎಂದು ಸಚಿವಾಲಯ ರಾಜ್ಯಗಳಿಗೆ ಸೂಚಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss