ಹೊಸದಿಗಂತ ವರದಿ:
ದೇಶಾದ್ಯಂತ ಯಾವುದೇ ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ ಎಂಬ ಮಹತ್ತರ ತೀರ್ಪನ್ನು ದೆಹಲಿ ಹೈಕೋರ್ಟ್ ನೀಡಿದೆ.
ಈ ಮೂಲಕ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಎತ್ತಿ ಹಿಡಿದಿದೆ. ಹೊಟೇಲ್ ಗಳಲ್ಲಿ ಮತ್ತು ರೆಸ್ಟೋರೆಂಟ್‌ಗಳಲ್ಲಿ ವಿಧಿಸಲಾಗುತ್ತಿದ್ದ ಸೇವಾ ಶುಲ್ಕ ನಿಷೇಧಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ 2019ರ ಕಾನೂನಿನ ಅನ್ವಯ ಈ ಹಿಂದೆ ಮಾರ್ಗಸೂಚಿ ಹೊರಡಿಸಿತ್ತು. ಆದರೆ, ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆ- ಇಂಡಿಯಾ ಮತ್ತು -ಫೆಡರೇಶನ್ ಆ- ಹೋಟೆಲ್ -ರೆಸ್ಟೋರೆಂಟ್ ಅಸೋಸಿಯೇಷನ್ ಆ- ಇಂಡಿಯಾ ಸಂಘಟನೆಗಳು ಇದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದವು.
ವಿಚಾರಣೆ ಕೈಗೆತ್ತಿಕೊಂಡ ದೆಹಲಿ ಹೈ ಕೋರ್ಟ್ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಹೊರಡಿಸಿದ್ದ ಸೇವಾ ಶುಲ್ಕ ನಿಷೇಧ ಮಾರ್ಗಸೂಚಿ ಮತ್ತು ಹೊಟೇಲ್ -ರೆಸ್ಟೋರೆಂಟ್ ಅಸೋಸಿಯೇಷನ್ ವಾದವನ್ನು ಆಲಿಸಿ ಅಂತಿಮವಾಗಿ ಹೊರಡಿಸಿದ ಮಾರ್ಗಸೂಚಿಯನ್ನು ಎತ್ತಿ ಹಿಡಿದು ತೀರ್ಪು ಪ್ರಕಟಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಗ್ರಾಹಕರ ಹಿತರಕ್ಷಣೆಗೆ ಬದ್ಧವಾಗಿದೆ. ಕೇಂದ್ರ ಗ್ರಾಹಕ ಸಚಿವಾಲಯ ಗ್ರಾಹಕರ ಹಿತರಕ್ಷಣೆಗಾಗಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಅದರಂತೆ 2019ರ ಕಾನೂನಿನ ಅನ್ವಯ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಹೊಟೇಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಕಡ್ಡಾಯವಾಗಿ ಸೇವಾ ಶುಲ್ಕ ವಿಧಿಸುವುದನ್ನು ನಿಷೇಧಿಸಿ ಮಾರ್ಗಸೂಚಿ ಹೊರಡಿಸಿತ್ತು. ಹೊಟೇಲ್ -ರೆಸ್ಟೋರೆಂಟ್ ಸಂಘಟನೆಗಳು ದೆಹಲಿ ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಿದ್ದರು. ಆದರೆ, ಹೈಕೋರ್ಟ್ ಗ್ರಾಹಕರ ಪರ ತೀರ್ಪು ನೀಡಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಸಂತಸ ವ್ಯಕ್ತಪಡಿಸಿದರು.
ದೆಹಲಿ ಹೈಕೋರ್ಟ್ ಆದೇಶದಂತೆ ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳು ಇನ್ನುಮುಂದೆ ಗ್ರಾಹಕ ರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು. ಗ್ರಾಹಕರಿಗೆ ಕಡ್ಡಾಯವಾಗಿ ಅಥವಾ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ ಎಂದು ಸಚಿವ ಜೋಶಿ ಸೂಚಿಸಿದರು.