ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ, ಆರೋಪ- ಪ್ರತ್ಯಾರೋಪ, ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಇದರ ನಡುವೆ ಮಾ.7 ರಂದು ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್ ಭಾಷಣ ಮಾಡಲಿದ್ದಾರೆ. ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ನಂತರ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ.
ಇಂದಿನ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರೇ ಅವುಗಳನ್ನು ಅನುಸರಿಸಿರುವ ಬಗ್ಗೆ ರಾಜ್ಯಪಾಲರ ಮೂಲಕ ಹೇಳಿಸುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ತಿರುಗೇಟು ನೀಡಲು ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಇಂದು ಮತ್ತೆ ನಾಳೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.