ಹೊಸದಿಗಂತ ಡಿಜಿಟಲ್ ಡೆಸ್ಕ್:
2008 ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ ನೀಡುವಂತೆ ಮಾಡಿದ್ದ ಮನವಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಇದರಿಂದ ರಾಣಾನನ್ನು ಭಾರತಕ್ಕೆ ಮರಳಿ ಕರೆತರುವ ದಾರಿ ಮತ್ತಷ್ಟು ಸುಗಮವಾಗಿದೆ.
ಪ್ರಸ್ತುತ ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಬಂಧನ ಕೇಂದ್ರದಲ್ಲಿರುವ 64 ವರ್ಷದ ರಾಣಾ, ಫೆಬ್ರವರಿಯಲ್ಲಿ ಒಂಬತ್ತನೇ ಸರ್ಕ್ಯೂಟ್‌ನ ಸರ್ಕ್ಯೂಟ್ ನ್ಯಾಯಾಧೀಶರಿಗೆ ಹಸ್ತಾಂತರವನ್ನು ತಡೆಹಿಡಿಯಲು ತುರ್ತು ಅರ್ಜಿಯನ್ನು ಸಲ್ಲಿಸಿದ್ದರು,ಆದ್ರೆ ಕೋರ್ಟ್ ತಿರಸ್ಕರಿಸಿತು.
ಇದರ ನಂತರ, ರಾಣಾ ಮತ್ತೆ ತುರ್ತು ಅರ್ಜಿಯನ್ನು ಸಲ್ಲಿಸಿ ವಿನಾಯಿತಿ ಕೇಳಿದರು. ಆದ್ರೆ ಸುಪ್ರೀಂ ಕೋರ್ಟ್ ಮನವಿಯನ್ನು ನಿರಾಕರಿಸಿದೆ.