ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ದೆಹಲಿ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ.ತಮ್ಮ ಬಂಧನವನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಸ್ವರ್ಣಕಾಂತ ಶರ್ಮಾ ಅವರಿದ್ಧ ಏಕಸದಸ್ಯ ಪೀಠವು ಯಾವ ಆಧಾರದ ಮೇಲೆ ನಿಮಗೆ ಜಾಮೀನು ಮಂಜೂರು ಮಾಡಬೇಕು ಎಂದು ಪ್ರಶ್ನಿಸಿ ಅರ್ಜಿಯನ್ನು ವಜಾ ಮಾಡಿದ್ದಾರೆ.
ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ್ ಸಂಜಯ್ ಸಿಂಗ್ರನ್ನು ಜಾರಿ ನಿರ್ದೇಶನಾಲಯ ಅಕ್ಟೋಬರ್ 4ರಂದು ವಶಕ್ಕೆ ಪಡೆದಿತ್ತು.