Sunday, June 4, 2023

Latest Posts

ಕಾಂಗ್ರೆಸ್​​ಗೆ ಹಿನ್ನಡೆ: ಪ್ರಧಾನಿ ಮೋದಿ ಮೆಗಾ ರೋಡ್​ ಶೋಗೆ ಅನುಮತಿ ನೀಡಿದ ಚುನಾವಣಾ ಆಯೋಗ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರು (Narendra Modi) ನಡೆಸಲಿರುವ ಮೆಗಾ ರೋಡ್​ ಶೋಗೆ ಅನುಮತಿ ನೀಡಬಾರದು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದ ಕಾಂಗ್ರೆಸ್​​ಗೆ ಹಿನ್ನಡೆಯಾಗಿದೆ.

ಪ್ರಧಾನಿಯವರ ರೋಡ್‌ ಶೋಗೆ ಅನುಮತಿ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ (Manoj Kumar Meena) ಗುರುವಾರ ಸಂಜೆ ತಿಳಿಸಿದ್ದಾರೆ.

ಮೇ 6, 7ರಂದು ಪ್ರಧಾನಿ ರೋಡ್‌ ಶೋಗೆ ಅನುಮತಿ ನೀಡಲಾಗಿದೆ. ಅಗ್ನಿಶಾಮಕ ದಳ ಸೇರಿದಂತೆ ಎಲ್ಲಾ ಅಗತ್ಯ ಅನುಮತಿಗಳನ್ನು ಪಡೆದಿದ್ದರೆ ಮಾತ್ರ ಅವಕಾಶ ನೀಡಲಾಗುತ್ತಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಮಾತ್ರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮೋದಿ ರೋಡ್ ಶೋ ನಡೆಸುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಹೀಗಾಗಿ ಅವರ ರೋಡ್ ಶೋಗೆ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!