ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಇತ್ತ ಪ್ರಕರಣದಿಂದ ಕೈಬಿಡಲು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ.
ಅಲ್ಲದೆ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.