ನಿರ್ಮಾಪಕ ಸುರೇಶ್‌ಗೆ ಹಿನ್ನಡೆ: ನಟ ಸುದೀಪ್ ದಾಖಲಿಸಿದ್ದ ಕೇಸ್ ರದ್ದುಪಡಿಸಲು ಕೋರ್ಟ್ ನಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಸುದೀಪ್ ವಿರುದ್ಧ ಸುಳ್ಳು ಆಸ್ತಿ ಸಂಪಾದನೆ, ವಂಚನೆ ಆರೋಪ ಮಾಡಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಎನ್ ಎಂ ಸುರೇಶ್ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.

ನಟ ಸುದೀಪ್ ವಿರುದ್ಧ ಮಾನಹಾನಿಕರ ಮತ್ತು ಸಮಾಜದಲ್ಲಿ ಅವರ ಹೆಸರು, ಖ್ಯಾತಿಗೆ ಧಕ್ಕೆ ತರುವಂಥ ಆರೋಪಗಳನ್ನು ಮಾಡಿರುವುದರಿಂದ ಆರೋಪಿಗಳ ವಿರುದ್ಧ ಪ್ರಾಥಮಿಕ ಪ್ರಕರಣವನ್ನು ದಾಖಲಿಸಲಾಗಿದೆ. ಸಮನ್ಸ್‌ ಜಾರಿ ಮಾಡುವ ಕ್ರಮದಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

9 ಕೋಟಿ ರೂಪಾಯಿ ಅಡ್ವಾನ್ಸ್ ಪಡೆದುಕೊಂಡು ಸಿನಿಮಾಗೆ ಡೇಟ್ಸ್ ಕೊಡದೇ ವಂಚನೆ ಮಾಡಿದ್ದಾರೆಂದು ಕಿಚ್ಚ ಸುದೀಪ್ ವಿರುದ್ಧ ನಿರ್ಮಾಪಕರಾದ ಎಂಎನ್ ಕುಮಾರ್ ಹಾಗೂ ಎಂ ಎನ್ ಸುರೇಶ್ ಆರೋಪ ಮಾಡಿದ್ದರು. ಈ ಪ್ರಕರಣ ಸಂಬಂಧ ಸುದೀಪ್ ಕೋರ್ಟ್‌ ಮೆಟ್ಟಿಲೇರಿ ಮಾನನಷ್ಟ ಮೊಕದ್ದೊಮೆ ದಾಖಲಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!