ರಾಹುಲ್‌ ಗಾಂಧಿಗೆ ಹಿನ್ನಡೆ: ಮಾನಹಾನಿ ಕೇಸ್‌ ರದ್ದು ಕೋರಿ ಸಲ್ಲಿಸಿದ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಲ್ಲಿಸಿದ ಅರ್ಜಿಯನ್ನು ಜಾರ್ಖಂಡ್‌ ಹೈಕೋರ್ಟ್‌ (Jharkhand High Court) ತಿರಸ್ಕರಿಸಿದೆ.

ಅಮಿತ್‌ ಶಾ ಕುರಿತು ಹೇಳಿಕೆ ನೀಡಿದ ಬಳಿಕ ಬಿಜೆಪಿ ನಾಯಕ ನವೀನ್‌ ಝಾ ಸಲ್ಲಿಸಿದ ಮಾನಹಾನಿ ಪ್ರಕರಣದ (Defamation Case) ರದ್ದುಗೊಳಿಸಬೇಕು ಎಂದು ಕೋರಿ ರಾಹುಲ್‌ ಗಾಂಧಿ ಅವರು ಅರ್ಜಿಯನ್ನು ಸಲ್ಲಿಸಿದ್ದರು.

ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದ್ದು, ಸೆಷನ್ಸ್‌ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಬೇಕು ಎಂದು ರಾಹುಲ್‌ ಗಾಂಧಿ ಪರ ವಕೀಲರಾದ ಪಿಯೂಷ್‌ ಚಿತ್ರೇಶ್‌ ಹಾಗೂ ದಿಪಾಂಕರ್‌ ರೈ ಅವರು ರಾಂಚಿ ಹೈಕೋರ್ಟ್‌ಗೆ ಮನವಿ ಮಾಡಿದರು. ಆದರೆ, ನ್ಯಾಯಮೂರ್ತಿ ಅಂಬುಜ್‌ಕಾಂತ್‌ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯನ್ನು ತಿರಸ್ಕರಿಸಿತು. ಇದರಿಂದಾಗಿ ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಅವರಿಗೆ ಭಾರಿ ಹಿನ್ನಡೆಯಾದಂತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!