ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಜೆಡಿಎಸ್ ವಿರೋಧದ ನಡುವೆ ವಿಧಾನಸಭೆಯಲ್ಲಿ ಅಂಗೀಕಾರವಾದ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕದೆ ವಾಪಸ್ ಕಳುಹಿಸಿದ್ದಾರೆ.
BBMP ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧದ ನಡುವೆ ರಾಜ್ಯ ಸರ್ಕಾರ ಬಿಲ್ ಪಾಸ್ ಮಾಡಿಕೊಂಡಿತ್ತು. ಆದ್ರೆ, ಇದೀಗ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಅವರು ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಾಪಸ್ ಕಳುಹಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಬಿಬಿಎಂಪಿ ವಿಭಜನೆ ಮಾಡಿ ಬೆಂಗಳೂರು ನಗರ ವಿಸ್ತೀರ್ಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಜಾರಿಗೆ ಮುಂದಾಗಿತ್ತು. ಸದ್ಯ ರಾಜ್ಯಪಾಲರು ಅಂಕಿತ ಹಾಕಲು ನಿರಾಕರಿಸಿ ಬಿಲ್ ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ವಿಪಕ್ಷಗಳ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸಿದ್ದಾರೆ.