ಸರ್ಕಾರಕ್ಕೆ ಹಿನ್ನಡೆ: ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ.

ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್​ ದ್ವಿಸದಸ್ಯ ಪೀಠ ಇಂದು (ಮೇ 29) ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಂಭವಾಗಿದೆ.

ಪಿಐಎಲ್‌ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್‌, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು. ಅಲ್ಲದೇ ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್‌ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!