1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್: ಶಾಲೆಯಲ್ಲಿ ‘ಸೇತುಬಂಧ’ ಕಾರ್ಯಕ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಶಾಲೆಗಳಲ್ಲಿ ನಾಳೆಯಿಂದ ತರಗತಿ ಚಟುವಟಿಕೆಗಳು ಆರಂಭವಾಗಲಿದ್ದು, 1 ರಿಂದ 3 ನೇ ತರಗತಿ ಮಕ್ಕಳಿಗೆ ಆರಂಭದ 30 ದಿನಗಳು ಹಾಗೂ 4 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 15 ದಿನಗಳ ಕಾಲ ಸೇತುಬಂಧ ಕಾರ್ಯಕ್ರಮ ನಡೆಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದೆ.

ಶಾಲಾ ಮಕ್ಕಳಲ್ಲಿನ ಕಲಿಕಾ ಅಂತರ ತಗ್ಗಿಸಲು ಸೇತುಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸೇತುಬಂಧ ಶಿಕ್ಷಣದ ಸಾಹಿತ್ಯ ಮತ್ತು ವಿನ್ಯಾಸವನ್ನು ಸಿದ್ದಪಡಿಸಿ dsert.karnataka.gov.in ಆ್ಯಪ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ.

ಶಾಲಾ ಹಂತದಲ್ಲಿ ಸೇತುಬಂಧ ಶಿಕ್ಷಣವನ್ನು ಅನುಷ್ಠಾನಗೊಳಿಸಲು ಸಹಕಾರಿಯಾಗುವಂತೆ ಈ ಸಾಹಿತ್ಯವನ್ನು ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗಾಗಿ ಸಿದ್ಧಪಡಿಸಿದ ಸದರಿ ಸಾಹಿತ್ಯವನ್ನು ಬಳಸಿ ತಮ್ಮ ತರಗತಿಯ ಪರಿಸರಕ್ಕೆ ಅನುಗುಣವಾಗಿ ಸೇತುಬಂಧವನ್ನು ಆಯೋಜಿಸುವಂತೆ ಸೂಚನೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!