ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುವಾಹಟಿಯ ಜಲುಕ್‌ಬರಿ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಗುವಾಹಟಿಯ ಜಂಟಿ ಪೊಲೀಸ್ ಕಮಿಷನರ್ ತುಬೆ ಪ್ರತೀಕ್ ವಿಜಯ್ ಕುಮಾರ್ ಮಾತನಾಡಿ, ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮೃತರನ್ನು ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಅವರ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.