ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………
ಹೊಸದಿಗಂತ ವರದಿ, ಶಿವಮೊಗ್ಗ:
ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 791 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 442 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ ಏಳು ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 401 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ 261, ಭದ್ರಾವತಿ 106, ಶಿಕಾರಿಪುರ 33, ತೀರ್ಥಹಳ್ಳಿ 81, ಸೊರಬ 21, ಸಾಗರ 197, ಹೊಸನಗರ 69 ಹಾಗೂ ಹೊರ ಜಿಲ್ಲೆಯ 23 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 3519 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 2902 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 401 ಜನ, ಖಾಸಗಿ ಆಸ್ಪತ್ರೆಯಲ್ಲಿ 370 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 139 ಜನರಿದ್ದು,
2513 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ