ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲೇಜು ಹಾಸ್ಟೆಲ್ ಆವರಣದಲ್ಲಿ ಗೋಮಾಂಸ ಬೇಯಿಸಿದ ಆರೋಪದ ಮೇರೆಗೆ ಒಡಿಶಾದ ಬರ್ಹಾಂಪುರ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರ ಹಾಕಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಪಾರಾಲ ಮಹಾರಾಜ ಎಂಜಿನಿಯರಿಂಗ್ ಕಾಲೇಜು ಅಧಿಕಾರಿಗಳು ಗುರುವಾರ ಆದೇಶ ಹೊರಡಿಸಿದ್ದು, ಎರಡು ಹಾಸ್ಟೆಲ್‌ಗಳ ಏಳು ವಿದ್ಯಾರ್ಥಿಗಳನ್ನು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹೊರಹಾಕಲಾಗಿದೆ ಎಂದು ತಿಳಿಸಿದ್ದಾರೆ. ಏಳು ವಿದ್ಯಾರ್ಥಿಗಳಲ್ಲಿ ಒಬ್ಬನಿಗೆ 2,000 ರೂಪಾಯಿ ದಂಡ ವಿಧಿಸಲಾಗಿದೆ. ಕಾಲೇಜು ಅಧಿಕಾರಿಗಳು ಈ ನಿರ್ಧಾರವನ್ನು ವಿದ್ಯಾರ್ಥಿಗಳ ಪೋಷಕರಿಗೆ ತಿಳಿಸಿರುವುದಾಗಿ ಅವರು ಹೇಳಿದರು.